AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಬೆಂಗಳೂರು, ಹಾಸನ, ಮೈಸೂರಿನಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ. ಚಳಿ ಸಂಪೂರ್ಣ ಮಾಯವಾಗಿದ್ದು, ಬಿಸಿಲ ಝಳ ಹೆಚ್ಚಿದೆ.ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿಯಲ್ಲಿ ಕೂಡ ತಾಪಮಾನ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ ಆಗುಂಬೆಯಲ್ಲಿ ಗರಿಷ್ಠ ಉಷ್ಣಾಂಶ 3.5 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಿದೆ.

Karnataka Weather: ಬೆಂಗಳೂರು, ಹಾಸನ, ಮೈಸೂರಿನಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆ
ಬೇಸಿಗೆ Image Credit source: Newsdrum
ನಯನಾ ರಾಜೀವ್
|

Updated on: Feb 17, 2025 | 7:21 AM

Share

ಬೆಂಗಳೂರು, ಹಾಸನ, ಮೈಸೂರು, ಚಿಂತಾಮಣಿಯಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿಯಲ್ಲಿ ಕೂಡ ತಾಪಮಾನ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ ಆಗುಂಬೆಯಲ್ಲಿ ಗರಿಷ್ಠ ಉಷ್ಣಾಂಶ 3.5 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಿದೆ.

ಗರಿಷ್ಠ ತಾಪಮಾನ ಕರಾವಳಿಯಲ್ಲಿ 33-36 ಡಿಗ್ರಿ ಸೆಲ್ಸಿಯಸ್, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ ಮತ್ತು ಕೊಪ್ಪಳದಲ್ಲಿ 33-34 ಡಿಗ್ರಿ ಸೆಲ್ಸಿಯಸ್​, ಗದಗ, ಕಲಬುರಗಿ, ರಾಯಚೂರಿನಲ್ಲಿ 35-38 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಮಂಡ್ಯ, ಮಡಿಕೇರಿ, ಚಿಂತಾಮಣಿಯಲ್ಲಿ 30-33 ಡಿಗ್ರಿ ಸೆಲ್ಸಿಯಸ್​, ಆಗುಂಬೆ, ದಾವಣಗೆರೆ, ಮೈಸೂರಿನಲ್ಲಿ 34-36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕನಿಷ್ಠ ತಾಪಮಾನ ಕರಾವಳಿ ಜಿಲ್ಲೆಗಳಲ್ಲಿ 21-25 ಡಿಗ್ರಿ ಸೆಲ್ಸಿಯಸ್, ಉತ್ತರ ಒಳನಾಡಿನ ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ ಮತ್ತು ಗದಗದಲ್ಲಿ 14-16 ಡಿಗ್ರಿ ಸೆಲ್ಸಿಯಸ್, ಬೆಳಗಾವಿ,ರಾಯಚೂರು, ಕಲಬುರಗಿ, ಕೊಪ್ಪಳದಲ್ಲಿ 17-18 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ, ಚಿಂತಾಮಣಿ, ಮಂಡ್ಯ ಮತ್ತು ಮಡಿಕೇರಿಯಲ್ಲಿ 12-15 ಡಿಗ್ರಿ ಸೆಲ್ಸಿಯಸ್, ಆಗುಂಬೆ, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಮೈಸೂರಿನಲ್ಲಿ 16-18 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ.

ಮತ್ತಷ್ಟು ಓದಿ:  ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ತಾಪಮಾನ, ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲು

ಚಾಮರಾಜನಗರದಲ್ಲಿ 13.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!