AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಉತ್ತರ ಒಳನಾಡಿನಲ್ಲಿ ವಿಪರೀತ ಚಳಿ, ಕರಾವಳಿ, ಮಲೆನಾಡಿನಲ್ಲಿ ಹವಾಮಾನ ಹೇಗಿದೆ?

ಕರ್ನಾಟಕದಾದ್ಯಂತ ಚಳಿ ಹೆಚ್ಚಾಗುತ್ತಿದೆ. ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್​ಗಿಂತ ಕಡಿಮೆಯಾಗುವ ನಿರೀಕ್ಷೆ ಇದೆ ಇದೆ. ಅಷ್ಟೇ ಅಲ್ಲದೆ ಉತ್ತ ಕನ್ನಡದಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 3.5 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ನಿರೀಕ್ಷೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಚಳಿಯ ಅನುಭವವಾಗುತ್ತಿದೆ.

Karnataka Weather: ಕರ್ನಾಟಕದ ಉತ್ತರ ಒಳನಾಡಿನಲ್ಲಿ ವಿಪರೀತ ಚಳಿ, ಕರಾವಳಿ, ಮಲೆನಾಡಿನಲ್ಲಿ ಹವಾಮಾನ ಹೇಗಿದೆ?
ಹವಾಮಾನImage Credit source: PTI
ನಯನಾ ರಾಜೀವ್
|

Updated on: Jan 07, 2025 | 8:00 AM

Share

ಮುಂದಿನ ದಿನಗಳ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ 10 ಡಿಗ್ರಿ ಸೆಲ್ಸಿಯಸ್​ಗಿಂತ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡದಲ್ಲಿ ಮುಂದಿನ ಐದು ದಿನಗಳ ಕಾಲ ಸಾಮಾನ್ಯ ಉಷ್ಣಾಂಶಕ್ಕಿಂತ 3.5 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಉತ್ತರ ಕನ್ನಡ,ಮ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ಕನಿಷ್ಠ ಉಷ್ಣಾಂಶ ಮತ್ತಷ್ಟು ಕಡಿಮೆಯಾಗಲಿದೆ.

ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು, ಕರ್ನಾಟಕದಾದ್ಯಂತ ಚಳಿ ಚಳಿ

ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 10.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 10.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್