Karnataka Weather: ಕರ್ನಾಟಕದಾದ್ಯಂತ ಚಳಿ ಕೊಂಚ ಕಡಿಮೆ, ಒಣಹವೆ ಮುಂದುವರಿಕೆ

ಕರ್ನಾಟಕದಾದ್ಯಂತ ಚಳಿ ಕೊಂಚ ಕಡಿಮೆಯಾಗಿದ್ದು, ಒಣಹವೆ ಮುಂದುವರೆದಿದೆ. ಕೆಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು ಸೆಕೆ ಸ್ವಲ್ಪ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ.

Karnataka Weather: ಕರ್ನಾಟಕದಾದ್ಯಂತ ಚಳಿ ಕೊಂಚ ಕಡಿಮೆ, ಒಣಹವೆ ಮುಂದುವರಿಕೆ
ಹವಾಮಾನ
Image Credit source: The Weather Channel

Updated on: Jan 21, 2024 | 8:02 AM

ಕರ್ನಾಟಕದಾದ್ಯಂತ ಚಳಿ ಕೊಂಚ ಕಡಿಮೆಯಾಗಿದ್ದು, ಒಣಹವೆ ಮುಂದುವರೆದಿದೆ. ಕೆಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು ಸೆಕೆ ಸ್ವಲ್ಪ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದೆಡೆ ಮೋಡಕವಿದ ವಾತಾವರಣವಿದೆ, ಇನ್ನೊಂದೆಡೆ ಬಿಸಿಲು ಕೂಡ ಕಾಣಿಸಿಕೊಂಡಿದೆ. ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರಿನಲ್ಲಿಂದು ಮೋಡಕವಿದ ವಾತಾವರಣ, ರಾಜ್ಯಾದ್ಯಂತ ಒಣಹವೆ

ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಾಮರಾಜನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ದಾವಣಗೆರೆಯಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us