Karnataka Weather: ಬೆಂಗಳೂರಿನಲ್ಲಿಂದು ಮೋಡಕವಿದ ವಾತಾವರಣ, ರಾಜ್ಯಾದ್ಯಂತ ಒಣಹವೆ

|

Updated on: Jan 19, 2024 | 7:30 AM

ಬೆಂಗಳೂರು ಹಾಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

Karnataka Weather: ಬೆಂಗಳೂರಿನಲ್ಲಿಂದು ಮೋಡಕವಿದ ವಾತಾವರಣ, ರಾಜ್ಯಾದ್ಯಂತ ಒಣಹವೆ
ಹವಾಮಾನ
Image Credit source: Mint
Follow us on

ಬೆಂಗಳೂರು ಹಾಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.

ಹೊನ್ನಾವರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್​ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಚಳಿ, ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು

ಚಾಮರಾಜನಗರದಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಸಮತಟ್ಟಾದ ಪ್ರದೇಶದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ 12.0 ಡಿಗ್ರಿ ಸೆಲ್ಸಯಸ್​ ವಿಜಯಪುರ ಹಾಗೂ ಬೆಳಗಾವಿಯಲ್ಲಿ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:29 am, Fri, 19 January 24