Karnataka Rain: ಬೀದರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯ ಮುನ್ಸೂಚನೆ

ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಲಿದೆ. ಕರಾವಳಿಯ ಹೊನ್ನವಾರದಲ್ಲಿ ಕಳೆದ 24 ಗಂಟೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಹಾಗೆ ಕಳೆದ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೆಳಗಾವಿ ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ

Karnataka Rain: ಬೀದರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯ ಮುನ್ಸೂಚನೆ
ಮಳೆ

Updated on: Nov 25, 2023 | 7:20 AM

ಬೆಂಗಳೂರು ನ.25: ನವೆಂಬರ್ 28 ರವರೆಗೆ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು (ನ.25) ಸಾಧಾರಣ ಮಳೆಯಾಗಲಿದೆ. ಕಳೆದ 24 ಗಂಟೆಯಲ್ಲಿ ತುಮಕೂರು, ಗುಬ್ಬಿ ಮತ್ತು ಅಡಗೂರಿನಲ್ಲಿ 59.5 ಮಿಮೀ ಮಳೆಯಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಂಡ್ಯ ಜಿಲ್ಲೆಯಲ್ಲಿ ಒಣಹವೆ ಬೀಸಲಿದೆ.

ಇದನ್ನೂ ಓದಿ: ನ.25ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರಾವಳಿಯ ಹೊನ್ನವಾರದಲ್ಲಿ ಕಳೆದ 24 ಗಂಟೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಹಾಗೆ ಕಳೆದ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೆಳಗಾವಿ ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದ್ದರೇ, ದಕ್ಷಿಣ ಒಳನಾಡಿನ ಬೆಂಗಳೂರು ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ