Karnataka Weather: ರಾಜ್ಯದಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ

| Updated By: ವಿವೇಕ ಬಿರಾದಾರ

Updated on: Oct 07, 2023 | 6:58 AM

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು (ಅ.07) ಅಲ್ಲಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಬಹುದು.

Karnataka Weather: ರಾಜ್ಯದಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ
ಮಳೆ
Follow us on

ರಾಜ್ಯದಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು (ಅ.07) ಅಲ್ಲಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಬಹುದು. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನು ಉಳಿದಂತೆ ಬಾಗಲಕೋಟೆ, ಬೀದರ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

ಇದನ್ನೂ ಓದಿ: ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ; ಅ.07ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉಳಿದಂತೆ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ನಲ್ಲಿ ಕಳೆದ 24 ಗಂಟೆಯಲ್ಲಿ ಅತ್ಯಧಿಕ 68.5 ಮಿಮೀ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ