AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕಕ್ಕೆ ವರುಣನ ಮರು ಪ್ರವೇಶ; ಮತ್ತೆ ಜೋರಾಗಲಿದೆ ಮಳೆ

Weather Today: ಸದ್ಯ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮಳೆ ಜೋರಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ ಹೆಚ್ಚಾಗಲಿದ್ದು, ಮುಂದಿನ ಎರಡು ದಿನ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ.

Karnataka Weather: ಕರ್ನಾಟಕಕ್ಕೆ ವರುಣನ ಮರು ಪ್ರವೇಶ; ಮತ್ತೆ ಜೋರಾಗಲಿದೆ ಮಳೆ
ಕರ್ನಾಟಕ ರಾಜ್ಯ ಹವಮಾನ ವರದಿ
TV9 Web
| Edited By: |

Updated on: Jul 09, 2021 | 7:57 AM

Share

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಳ್ಳಲಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನೀಡಿದ್ದ ಸೂಚನೆ ನಿಜವಾಗಿದೆ. ಜುಲೈ 8ರಂದು ರಾಜ್ಯದ ಹಲವೆಡೆ ಮಳೆ ಸುರಿಯಲಿದೆ ಎಂಬ ಸೂಚನೆಗೆ ಅನುಗುಣವಾಗಿ ನಿನ್ನೆ (ಜುಲೈ 8, ಗುರುವಾರ) ಬೆಂಗಳೂರು ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಈ ವಾತಾವರಣ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮುಂದುವರೆಯಲಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈ ಬಾರಿ ಬೇಸಿಗೆಯಿಂದಲೇ ಅಂದರೆ ಮೇ ತಿಂಗಳ ಆರಂಭದಿಂದಲೇ ಆಗಾಗ ಮಳೆ ಸುರಿಯುತ್ತಿತ್ತಾದರೂ ಮುಂಗಾರು ಪ್ರವೇಶದ ನಂತರ ಮೊದಲ ಒಂದೆರೆಡು ವಾರಗಳನ್ನು ಹೊರತುಪಡಿಸಿದರೆ ಎಲ್ಲೆಡೆ ಮಳೆ ಕ್ಷೀಣವಾಗಿತ್ತು. ಆದರೆ, ಇದೀಗ ಮತ್ತೆ ವರುಣ ಪುನಾರಾಗಮನ ಮಾಡುವಂತೆ ತೋರುತ್ತಿದ್ದು, ಮಲೆನಾಡು, ಕರಾವಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ.

ಮುಂಗಾರಿನ ಬಗ್ಗೆ ಈ ಹಿಂದೆ ಮಾಹಿತಿ ನೀಡಿದ್ದ ಹವಾಮಾನ ಇಲಾಖೆ ಜುಲೈ ಮೊದಲ ವಾರದ ಅಂತ್ಯದ ತನಕ ಮುಂಗಾರಿಗೆ ಪೂರಕ ವಾತಾವರಣ ಇಲ್ಲ. ಆದರೆ, ಎರಡನೇ ವಾರದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಜುಲೈ 8ರ ನಂತರ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಮುನ್ಸೂಚನೆ ನೀಡಿತ್ತು. ಅದರಂತೆಯೇ ಈಗ ಮಳೆ ಆರಂಭವಾಗಿದೆ ಎನ್ನುವುದು ಗಮನಾರ್ಹ. ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮಹೋಪಾತ್ರ ಹೇಳುವಂತೆ, ಜುಲೈ ಎರಡನೇ ವಾರದಲ್ಲಿ ಅಂದರೆ ಪ್ರಸ್ತುತ ಹಂತದಲ್ಲಿ ನೈರುತ್ಯ ಮುಂಗಾರು ಚುರುಕು ಪಡೆಯಲಿದ್ದು, ದೇಶಾದ್ಯಂತ ಮಳೆಯಾಗುವ ಸಾಧ್ಯತೆಯಿದೆ.

ಸದ್ಯ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮಳೆ ಜೋರಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ ಹೆಚ್ಚಾಗಲಿದ್ದು, ಮುಂದಿನ ಎರಡು ದಿನ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಇನ್ನೂ 3 ದಿನ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.

ಈ ವರ್ಷ ನೈರುತ್ಯ ಮುಂಗಾರು ದಕ್ಷಿಣ ಭಾರತ ಹಾಗೂ ಉತ್ತರ ಭಾರತದಲ್ಲಿ ಸಾಮಾನ್ಯ ರೀತಿ ಇರಲಿದ್ದು ಕೆಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇರಲಿದೆ. ಆದರೆ ಭಾರತದ ಪೂರ್ವ ಭಾಗ ಮತ್ತು ಈಶಾನ್ಯ ಭಾಗದಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಕಡಿಮೆ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆಯಾಗಿ ಸೆಪ್ಟೆಂಬರ್ ತನಕ ದೇಶದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: Karnataka Rain: ಜುಲೈ 10 ರವರೆಗೆ ರಾಜ್ಯದಲ್ಲಿ ಭಾರಿ ಮಳೆ; ಎಲ್ಲೆಲ್ಲಿ ಯೆಲ್ಲೋ ಅಲರ್ಟ್ ಘೋಷಣೆ? ವಿವರ ಇಲ್ಲಿದೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?