Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಇಂದಿನಿಂದ ಜುಲೈ 10 ರವರೆಗೆ ರಾಜ್ಯದಲ್ಲಿ ಭಾರಿ ಮಳೆ; ಎಲ್ಲೆಲ್ಲಿ ಯೆಲ್ಲೋ ಅಲರ್ಟ್ ಘೋಷಣೆ? ವಿವರ ಇಲ್ಲಿದೆ

Karnataka Weather: ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ತುಮಕೂರು, ಚಿತ್ರದುರ್ಗದ ಜಿಲ್ಲೆಗಳ ಕೆಲವು ಕಡೆ ಮಳೆಯಾಗಲಿದ್ದು ಜುಲೈ 6 ಹಾಗೂ 7 ರಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿಯೂ ಮುಂದಿನ ಎರಡು ದಿನಗಳ ಕಾಲ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ‌ ಇಲಾಖೆ ತಿಳಿಸಿದೆ.

Karnataka Rain: ಇಂದಿನಿಂದ ಜುಲೈ 10 ರವರೆಗೆ ರಾಜ್ಯದಲ್ಲಿ ಭಾರಿ ಮಳೆ; ಎಲ್ಲೆಲ್ಲಿ ಯೆಲ್ಲೋ ಅಲರ್ಟ್ ಘೋಷಣೆ? ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Digi Tech Desk

Updated on:Jul 06, 2021 | 2:20 PM

ಬೆಂಗಳೂರು: ನೈಋತ್ಯ ಮುಂಗಾರು ಹಂಗಾಮಿನಲ್ಲಿ ಇಂದಿನಿಂದ ಜುಲೈ 10 ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಈಗಲೂ ಕೆಲವೆಡೆ ಮಳೆಯಾಗುತ್ತಿದ್ದು, ಅಲ್ಲೆಲ್ಲ ಇನ್ನೂ ಎರಡು ದಿನಗಳ ಕಾಲ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ‌ ಇಲಾಖೆಯ ನಿರ್ದೇಶಕರ ಸಿಎಸ್ ಪಾಟೀಲ್ ಹೇಳಿದ್ದಾರೆ.

ರಾಜ್ಯದಲ್ಲಿ ಇಂದು ಸಹ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇಂದಿನಿಂದ ಜುಲೈ 10 ವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಕಡೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 6 ರಿಂದ 10 ವರೆಗೆ ಯಲ್ಲೋ ಅಲರ್ಟ್ ಘೋಷಣೆಯಾಗಿದೆ.

ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ತುಮಕೂರು, ಚಿತ್ರದುರ್ಗದ ಜಿಲ್ಲೆಗಳ ಕೆಲವು ಕಡೆ ಮಳೆಯಾಗಲಿದ್ದು, ಜುಲೈ 6 ಹಾಗೂ 7 ರಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿಯೂ ಮುಂದಿನ ಎರಡು ದಿನಗಳ ಕಾಲ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ‌ ಇಲಾಖೆ ತಿಳಿಸಿದೆ.

ಈ ಬಾರಿ ಮುಂಗಾರು ಜೋರಾಗಿದ್ದು, ಬಹುತೇಕ ಕಡೆ ಒಳ್ಳೆಯ ಮಳೆಯಾಗಿದೆ. ಆದರೆ ಕರ್ನಾಟಕದ ಜಲಾಶಯಗಳ ಮಟ್ಟಿಗೆ ಹೇಳಬೇಕೆಂದ್ರೆ ಜಲಾಶಯಗಳಲ್ಲಿ ನೀರಿನ ಮಟ್ಟ ಏರಲು ಇನ್ನೂ ಸಾಕಷ್ಟು ಮಳೆಯಾಗಬೇಕಿದೆ. ಜೂನ್​ ತಿಂಗಳ ಮುಂಗಾರು ಮಳೆಗೆ ಜಲಾಶಯಗಳಿಗೆ ಭಾರೀ ನೀರು ಹರಿದುಬಂದಿದೆ. ಆದರೂ ಆಗಸ್ಟ್-ಸೆಪ್ಟೆಂಬರ್​ ಮಳೆ ನೀರಿಗೆ ಕೆಆರ್​ಎಸ್ ಅಣೆಕಟ್ಟೆ ಸೇರಿದಂತೆ ಬಹುತೇಕ ಎಲ್ಲ ಜಲಾಶಯಗಳು ತುಂಬುವ ಅಂದಾಜಿದೆ.

ಭಾರತೀಯ ಹವಾಮಾನ ಇಲಾಖೆ ಅಂದಾಜು ಮಾಡಿದಷ್ಟು ಮಳೆ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಆಗಿಲ್ಲ. ಕರ್ನಾಟಕ ಸೇರಿದಂತೆ ನೆರೆಯ ರಾಜ್ಯಗಳಲ್ಲಿ ಮಳೆಯ ಕೊರತೆ ಕಾಣಿಸಿಕೊಂಡಿದೆ. ಹಾಗಾಗಿ ಮುಂದಿನ ತಿಂಗಳುಗಳಲ್ಲಿ ಮುಂಗಾರು ಮಳೆ ಹೇಗೆ ಸುರಿಯಲಿದೆ ಎಂಬುದರ ಆಧಾರದ ಮೇಲೆ ರಾಜ್ಯದ 12 ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗುವುದನ್ನು ಅವಲಂಬಿಸಿದೆ.

ಈ ಮೊದಲು ಜುಲೈ ಮಧ್ಯ ಭಾಗದಲ್ಲಿ ರಾಜ್ಯದ ಜಲಾಶಯಗಳು ತುಂಬುತ್ತಿದ್ದವು. ಆದರೆ ಕಳೆದ ಎರಡು ವರ್ಷಗಳಿಂದ ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲಿ ಮುಂಗಾರು ಹೆಚ್ಚಾಗುತ್ತಿದೆ. ಹಾಗಾಗಿ ಈ ಬಾರಿಯೂ ಮಳೆ ಚೆನ್ನಾಗಿ ಆದರೆ, ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಜಲಾಶಯಗಳು ತುಂಬಿತುಳುಕಲಿವೆ. ಆದರೆ ಸದ್ಯಕ್ಕೆ ಕೃಷಿ ನೀರಾವರಿ ಮತ್ತು ಕುಡಿಯುವ ನೀರಿಗೆ ಯಾವುದೇ ಬಾಧಕವಿಲ್ಲ.

(monsoon 2021 rains till july 10 informs meterological department director cs patil)

Published On - 1:53 pm, Tue, 6 July 21

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!