AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಮಲೆನಾಡು, ಕರಾವಳಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಜುಲೈ 1ರ ತನಕ ಭಾರೀ ಮಳೆ; ಬೆಂಗಳೂರಿನಲ್ಲೂ ಇಂದು ವರುಣ ದರ್ಶನ

Weather Today: ಇಂದಿನಿಂದ ಜುಲೈ 1ರ ತನಕ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷೆ ಇದ್ದು, 4 ದಿನಗಳ ಕಾಲ ಯೆಲ್ಲೋ ಅಲರ್ಟ್​ ಘೋಷಣೆಯಾಗಿದೆ. ಉತ್ತರ ಒಳನಾಡು ಭಾಗದಲ್ಲೂ ಮಳೆಯ ತೀವ್ರತೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆಯ ವರದಿಗಳು ಸೂಚನೆ ನೀಡಿವೆ.

Karnataka Weather: ಮಲೆನಾಡು, ಕರಾವಳಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಜುಲೈ 1ರ ತನಕ ಭಾರೀ ಮಳೆ; ಬೆಂಗಳೂರಿನಲ್ಲೂ ಇಂದು ವರುಣ ದರ್ಶನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 28, 2021 | 8:49 AM

Share

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲ ದಿನಗಳಿಂದ ಕೊಂಚ ತಗ್ಗಿದ್ದ ಮಳೆಯ ಆರ್ಭಟ ಮತ್ತೆ ಜೋರಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜುಲೈ 1ರ ತನಕ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷೆ ಇದ್ದು, 4 ದಿನಗಳ ಕಾಲ ಯೆಲ್ಲೋ ಅಲರ್ಟ್​ ಘೋಷಣೆಯಾಗಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಇಂದಿನಿಂದ ವ್ಯಾಪಕ ಮಳೆಯಾಗಲಿದೆ. ಅಲ್ಲದೇ, ಉತ್ತರ ಒಳನಾಡು ಭಾಗದಲ್ಲೂ ಮಳೆಯ ತೀವ್ರತೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆಯ ವರದಿಗಳು ಸೂಚನೆ ನೀಡಿವೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಭಾಗಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲೂ ನಿನ್ನೆಯಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಹಲವೆಡೆ ತಗ್ಗು ಪ್ರದೇಶ ಹಾಗೂ ಮನೆಗಳಿಗೆ ನೀರು ನುಗ್ಗಿ ಅವ್ಯವಸ್ಥೆಯೂ ಆಗಿದೆ. ಸದ್ಯ ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಪ್ರಾಂತ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜುಲೈ 1 ರ ತನಕ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ವಲಯದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಪ್ರಸ್ತುತ ಕರ್ನಾಟಕದ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಇನ್ನೊಂದು ಸುತ್ತಿನ ಮಳೆ ಸುರಿಯುವ ಸಾಧ್ಯತೆ ದಟ್ಟವಾಗಿದೆ. ಕಲ್ಯಾಣ ಕರ್ನಾಟಕದ ರಾಯಚೂರು, ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ ಉತ್ತಮ ಮಳೆಯಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿಯ ಕೆಲ ವಾರ್ಡ್​ಗಳಿಗೆ ನೀರು ನುಗ್ಗಿ ಸಂಪೂರ್ಣ ಜವಾವೃತವಾಗಿವೆ. ಅವ್ಯವಸ್ಥೆಯ ಪರಿಣಾಮ ತಗ್ಗು ಪ್ರದೇಶಗಳಲ್ಲಿನ ಜನರು ಭಾರೀ ಸಮಸ್ಯೆ ಎದುರಿಸುವಂತೆ ಆಗಿದೆ.

ಇತ್ತ ರಾಜಧಾನಿ ಬೆಂಗಳೂರಿನಲ್ಲೂ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅನ್​ಲಾಕ್​ ಆಗಿ ಜನಜೀವನ ಸಾಮಾನ್ಯ ಪರಿಸ್ಥಿತಿಗೆ ಹಿಂದಿರುಗುತ್ತಿರುವಾಗಲೇ ಮಳೆರಾಯನೂ ಜತೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಯಲ್ಲಿ ಇಂದಿನಿಂದ ಜುಲೈ 1ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಇಂದು ಬಹುತೇಕ ಎಲ್ಲಾ ಕಡೆಗಳಲ್ಲಿ ಮಳೆ ಸುರಿಯಬಹುದು. ಹೈದರಾಬಾದ್ ಕರ್ನಾಟಕ ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗಲಿದ್ದು, ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಅಂತೆಯೇ, ದಕ್ಷಿಣ ಒಳನಾಡು ಭಾಗದಲ್ಲಿ ಜುಲೈ 1ರ ತನಕ ಬಹುಪಾಲು ಎಲ್ಲೆಡೆ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶ್ವಾಸಕೋಶದ ಮೇಲೆ ಡೆಲ್ಟಾ ಪ್ಲಸ್​ ಪರಿಣಾಮ ಹೀಗಿದೆ; ಕೊರೊನಾ ಲಸಿಕೆ ಪಡೆದವರಿಗೆ ಹೆಚ್ಚು ಸಮಸ್ಯೆ ಇಲ್ಲ: ಡಾ.ಎನ್​.ಕೆ.ಅರೋರಾ ಕರುನಾಡಿನಲ್ಲಿ ಮತ್ತೆ ಮಳೆರಾಯನ ಅಬ್ಬರ.. ಮಂತ್ರಾಲಯಕ್ಕೆ ದಿಗ್ಬಂಧನ ವಿಧಿಸಿದ್ದ ವರುಣ, ಈಗ ಸಂಚಾರಕ್ಕೆ ಮುಕ್ತವಾದ ರಸ್ತೆಗಳು

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು