Karnataka Weather: ಕರ್ನಾಟಕದ ವಿವಿಧೆಡೆ ಭಾರಿ ಮಳೆ ಸಾಧ್ಯತೆ, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ, ತಾಪಮಾನದಲ್ಲಿ ಏರಿಕೆ ಕಂಡರೂ ಎಲ್ಲೂ ಮಳೆಯಾಗುತ್ತಿಲ್ಲ, ಆದರೆ ಇಂದಿನಿಂದ ಎರಡು ದಿನಗಳ ಕಾಲ 14 ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Weather: ಕರ್ನಾಟಕದ ವಿವಿಧೆಡೆ ಭಾರಿ ಮಳೆ ಸಾಧ್ಯತೆ, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಮಳೆImage Credit source: Indian Express
Follow us
ನಯನಾ ರಾಜೀವ್
|

Updated on: Apr 07, 2024 | 7:58 AM

ಕರ್ನಾಟಕದಲ್ಲಿ ಬಿಸಿಲ ಧಗೆ ಹೆಚ್ಚಾಗಿದೆ, ಸಾಮಾನ್ಯವಾಗಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಮಳೆ ಬರುವುದು ವಾಡಿಕೆ, ಆದರೆ ಒಂದು ದಿನ ಮಡಿಕೇರಿ, ಮಂಗಳೂರು ಆಸುಪಾಸಿನಲ್ಲಿ ಮಳೆಯಾಗಿದ್ದು ಬಿಟ್ಟರೆ ಇನ್ನೇಲ್ಲೂ ಭಾರಿ ಮಳೆಯಾಗಿಲ್ಲ. ಇಂದಿನಿಂದ 14 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಮದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಏಪ್ರಿಲ್ 9 ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಹಗುರ ಮಳೆಯಾಗಲಿದೆ.

ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತಷ್ಟು ಹೆಚ್ಚಾಗಲಿದೆ. ಬೀದರ್, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಹಾವೇರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 8ರ ಬಳಿಕ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 38.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 39.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ