Karnataka Weather: ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 8ರ ಬಳಿಕ ಮಳೆ

ಕರ್ನಾಟಕದಲ್ಲಿ ತಾಪಮಾನ ಏರಿಕೆಯಾಗುತ್ತಿದೆ, ಏಪ್ರಿಲ್​ 8ರ ಬಳಿಕ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 8ರ ಬಳಿಕ ಮಳೆ
ಮಳೆ
Image Credit source: Scroll.in

Updated on: Apr 05, 2024 | 7:37 AM

ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್​ 8ರ ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್​ 8 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್​ 9ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಯಾದಗಿರಿ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮುಂದಿನ 3 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತಷ್ಟು ಹೆಚ್ಚಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 35.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 42.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯ ಮುನ್ಸೂಚನೆ, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಹೊನ್ನಾವರದಲ್ಲಿ 33.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 42.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್​​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us