Karnataka Weather: ಕರ್ನಾಟಕ ಹವಾಮಾನ ವರದಿ: ಏಪ್ರಿಲ್ 18ರಿಂದ ಬಹುತೇಕ ಜಿಲ್ಲೆಗಳಲ್ಲಿ 5 ದಿನ ಮಳೆ

|

Updated on: Apr 16, 2024 | 7:29 AM

ಕರ್ನಾಟಕದಲ್ಲಿ ಬಿಸಿಲ ಝಳದ ನಡುವೆ ಭೂಮಿಗೆ ತಂಪೆರೆಯಲು ವರುಣ ದೇವ ಸಿದ್ಧನಾಗಿದ್ದಾನೆ. ಏಪ್ರಿಲ್​ 18ರಿಂದ ಐದು ದಿನಗಳ ಕಾಲ ರಾಜ್ಯದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Karnataka Weather: ಕರ್ನಾಟಕ ಹವಾಮಾನ ವರದಿ: ಏಪ್ರಿಲ್ 18ರಿಂದ ಬಹುತೇಕ ಜಿಲ್ಲೆಗಳಲ್ಲಿ 5 ದಿನ ಮಳೆ
ಮಳೆ
Image Credit source: Hindustan Times
Follow us on

ಬಿಸಿಲ ಝಳದಿಂದ ಬಸವಳಿದಿದ್ದ ಕರ್ನಾಟಕದ ಜನತೆಗೆ ತಂಪೆರೆಯಲು ವರುಣದೇವ ಬರಲಿದ್ದಾನೆ. ಈ ಬಾರಿ ಮುಂಗಾರು ಕೂಡ ವಾಡಿಕೆಗಿಂತ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಏಪ್ರಿಲ್ 18ರಿಂದ ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಏಪ್ರಿಲ್ 18ರಿಂದ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ,ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಹಾಗೆಯೇ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲೂ ಮಳೆಯಾಗಲಿದೆ.

ಕಲಬುರಗಿ ಹಾಗೂ ರಾಯಚೂರಿನಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಎಚ್​ಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Monsoon 2024: ಭಾರತದಲ್ಲಿ ಈ ವರ್ಷದ ಮುಂಗಾರಿನಲ್ಲಿ ವಾಡಿಕೆಗಿಂತಲೂ ಹೆಚ್ಚು ಮಳೆ ನಿರೀಕ್ಷೆ: ಹವಾಮಾನ ಇಲಾಖೆ

ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ , 26.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 39.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 37.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ