Karnataka Weather: ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ತಾಪಮಾನ, ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲು

ಮುಂದಿನ ಎರಡು ದಿನಗಳ ಕಾಲ ಕರ್ನಾಟಕದಾದ್ಯಂತ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳು ಕಂಡುಬರುವುದಿಲ್ಲ, ಎರಡು ದಿನಗಳ ಬಳಿಕ ಗರಿಷ್ಠ ಉಷ್ಣಾಂಶದಲ್ಲಿ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕ್ರಮೇಣವಾಗಿ ಎಲ್ಲೆಡೆ ಗರಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ. ಚಾಮರಾಜನಗರದಲ್ಲಿ 13.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಧಾರವಾಡ, ಕಲಬುರಗಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿದೆ.

Karnataka Weather: ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ತಾಪಮಾನ, ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲು
ಬೇಸಿಗೆ
Image Credit source: Karnataka.com

Updated on: Feb 16, 2025 | 7:57 AM

ಮುಂದಿನ ಎರಡು ದಿನಗಳ ಕಾಲ ಕರ್ನಾಟಕದಾದ್ಯಂತ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳು ಕಂಡುಬರುವುದಿಲ್ಲ, ಎರಡು ದಿನಗಳ ಬಳಿಕ ಗರಿಷ್ಠ ಉಷ್ಣಾಂಶದಲ್ಲಿ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕ್ರಮೇಣವಾಗಿ ಎಲ್ಲೆಡೆ ಗರಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ.

ಚಾಮರಾಜನಗರದಲ್ಲಿ 13.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಧಾರವಾಡ, ಕಲಬುರಗಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಚಿಂತಾಮಣಿ, ಮಂಡ್ಯ, ಮೈಸೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯವಾಗಿತ್ತು.

ಗರಿಷ್ಠ ತಾಪಮಾನವು 32-34ಡಿಗ್ರಿ ಸೆಲ್ಸಿಯಸ್​ನಷ್ಟಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಕೊಪ್ಪಳದಲ್ಲಿ 32-34 ಡಿಗ್ರಿ ಸೆಲ್ಸಿಯಸ್, ಧಾರವಾಡ, ಕಲಬುರಗಿ, ರಾಯಚೂರಿನಲ್ಲಿ 35-37ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, , ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಡಿಕೇರಿಯಲ್ಲಿ 34-36 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಾಂತ್ಯದಲ್ಲಿ ಹೆಚ್ಚಲಿದೆ ಬಿಸಿಲ ಝಳ

ಕನಿಷ್ಠ ತಾಪಮಾನವು ಕರಾವಳಿಯಲ್ಲಿ 23-24 ಡಿಗ್ರಿ ಸೆಲ್ಸಿಯಸ್​ನಷ್ಟಿದೆ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ ಮತ್ತು ಗದಗದಲ್ಲಿ 15-17 ಡಿಗ್ರಿ ಸೆಲ್ಸಿಯಸ್​, ರಾಯಚೂರು, ಕಲಬುರಗಿ, ಹಾವೇರಿ ಮತ್ತು ಕೊಪ್ಪಳದಲ್ಲಿ 18-19ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಂತಾಮಣಿ, ದಾವಣಗೆರೆಯಲ್ಲಿ 13-16 ಡಿಗ್ರಿ ಸೆಲ್ಸಿಯಸ್, ಆಗುಂಬೆ, ಬೆಂಗಳೂರು, ಚಿತ್ರದುರ್ಗ, ಹಾಸನ, ಮಂಡ್ಯ, ಮಡಿಕೇರಿ, ಮೈಸೂರಿನಲ್ಲಿ 17-19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.

ಬೆಂಗಳೂರಿನಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us