AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ

ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಈ ವಾರಾಂತ್ಯದೊಳಗೆ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲೂ ಕೂಡ ಬಿಸಿಲ ಝಳ ಹೆಚ್ಚಲಿದೆ.

Karnataka Weather: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ
ಬಿಸಿಲುImage Credit source: Coastal Digest
ನಯನಾ ರಾಜೀವ್
|

Updated on: Feb 11, 2025 | 7:20 AM

Share

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಿದೆ. ಅಷ್ಟೇ ಅಲ್ಲದೆ ಕರಾವಳಿ ಜಿಲ್ಲೆಗಳಲ್ಲೂ ಕೂಡ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರದಲ್ಲೂ ಕೂಡ ಬಿಸಿಲ ಝಳ ಹೆಚ್ಚಲಿದೆ.

ದಾವಣಗೆರೆಯಲ್ಲಿ 14 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ದಾವಣಗೆರೆಯಲ್ಲಿ ಅತ್ಯಂತ ಕನಿಷ್ಠ ತಾಪಮಾನ, ಕರ್ನಾಟಕದಾದ್ಯಂತ ಒಣಹವೆ

ಬೆಳಗಾವಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?