Karnataka Weather: ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಮಂಡ್ಯದಲ್ಲಿ ವಿಪರೀತ ಚಳಿ
ಕರ್ನಾಟಕದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಗೋಚರಿಸದಿದ್ದರೂ, ಉಷ್ಣಾಂಶ ಕೊಂಚ ಏರುಪೇರಾಗುತ್ತಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಮಂಡ್ಯದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದೆಲ್ಲೆಡೆ ಸೆಕೆ ಹೆಚ್ಚಿದ್ದರೂ ಕೂಡ ಸಂಜೆ ವೇಳೆಗೆ ಚಳಿಯೂ ಕೂಡ ಇದೆ. ಮಂಡ್ಯದಲ್ಲಿ 15.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನವೂ ಹೆಚ್ಚಳವಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಳ ಸಾಧ್ಯತೆ
ಬೀದರ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಿಮಾಚಲ ಪ್ರದೇಶದಲ್ಲಿ ಮಳೆ ಮಾರ್ಚ್ 1 ಹಾಗೂ 2ರಂದು ಹಿಮಾಚಲ ಪ್ರದೇಶದಲ್ಲಿ ಹಿಮಪಾತದ ಚಟುವಟಿಕೆ ಹೆಚ್ಚಲಿದೆ ಜತೆಗೆ ಮಳೆಯೂ ಬೀಳಲಿದೆ ಎಂದು ಹೇಳಲಾಗುತ್ತಿದೆ.ದೆಹಲಿ, ಉತ್ತರಾಖಂಡದಲ್ಲಿ ಗುಡುಗು ಸಹಿತ ಮಳೆಯಾಗಲಿದೆ, ಉತ್ತರ ಪ್ರದೇಶದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ