ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬೆಳಗ್ಗೆ ಬಿಸಿಲ ಝಳವಿದ್ದರೆ ಸಂಜೆಯಷ್ಟೊತ್ತಿಗೆ ಚಳಿ ಶುರುವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ಶೀತ ಗಾಳಿ ಬೀಸಲಿದೆ, ಮಳೆಯಾಗುವ ಸಾಧ್ಯತೆ ಕಡಿಮೆ ಇದೆ.
ಎಚ್ಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 36.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ದೆಹಲಿ, ಎನ್ಸಿಆರ್, ವಾರಾಣಸಿಯಲ್ಲೂ ಮಳೆ
ವಾರಾಣಸಿಯಲ್ಲಿ ಮಂಗಳವಾರ ಬೆಳಗ್ಗೆ ತೀವ್ರ ಬಿಸಿಲಿನ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಹಠಾತ್ ವಾತಾವರಣ ಬದಲಾಗಿತ್ತು, ಬದಲಾಗುತ್ತಿರುವ ಗಾಳಿಯಿಂದಾಗಿ ಆಕಾಶದಲ್ಲಿ ದಟ್ಟವಾದ ಮೋಡಗಳು ಕಾಣಿಸಿಕೊಂಡವು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಗುಡುಗು ಮಿಂಚು ಸಹಿತ ಮಳೆ ಸುರಿಯಲಾರಂಭಿಸಿತು.
ಮತ್ತಷ್ಟು ಓದಿ: Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಸಾಧಾರಣ ಮಳೆಯಾಗುವ ಮುನ್ಸೂಚನೆ
ಈ ಮಳೆ ರೈತರಿಗೆ ತುಂಬಾ ಅನುಕೂಲವಾಗಲಿದೆ. ಮಳೆ ಬೆಳೆ ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತದೆ. ಮಳೆಯಿಂದಾಗಿ ಶಾಲಾ ಮಕ್ಕಳ ಓಡಾಟಕ್ಕೆ ತೊಂದರೆಯಾಗಿದೆ. ಗರಿಷ್ಠ ತಾಪಮಾನ 27.0 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 13.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ