AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ

ಬೆಂಗಳೂರಲ್ಲಿ ಬುಧವಾರದಿಂದಲೂ ಮೋಡಕವಿದ ವಾತಾವರಣವಿದೆ, ಚಳಿ ಕಡಿಮೆಯಾಗಿ ಗರಿಷ್ಠ ಉಷ್ಣಾಂಶ ಹೆಚ್ಚಾಗಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚಿದೆ.

Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ
ಹವಾಮಾನImage Credit source: Quora
ನಯನಾ ರಾಜೀವ್
|

Updated on: Jan 25, 2024 | 7:31 AM

Share

ಬೆಂಗಳೂರಲ್ಲಿ ಬುಧವಾರದಿಂದಲೂ ಮೋಡಕವಿದ ವಾತಾವರಣವಿದೆ, ಚಳಿ ಕಡಿಮೆಯಾಗಿ ಗರಿಷ್ಠ ಉಷ್ಣಾಂಶ ಹೆಚ್ಚಾಗಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 9.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, 29 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ:Karnataka Weather: ಕರ್ನಾಟಕದಾದ್ಯಂತ ತಗ್ಗಿದ ಚಳಿ, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ

ಕಾರವಾರದಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹೊನ್ನಾವರದಲ್ಲಿ 30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಯಚೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಡ್ಯದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್