AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಬೆಂಗಳೂರು ಸೇರಿ ಹಲವೆಡೆ ಮೋಡಕವಿದ ವಾತಾವರಣ, ಚಳಿ ಕೊಂಚ ಕಡಿಮೆ

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಮೋಡಕವಿದ ವಾತಾವರಣವಿರಲಿದೆ, ಉತ್ತರ ಒಳನಾಡಿನಲ್ಲಿ ಭಾರಿ ಚಳಿ ಮುಂದುವರೆದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

Karnataka Weather: ಬೆಂಗಳೂರು ಸೇರಿ ಹಲವೆಡೆ ಮೋಡಕವಿದ ವಾತಾವರಣ, ಚಳಿ ಕೊಂಚ ಕಡಿಮೆ
ಹವಾಮಾನImage Credit source: Zee Zest
ನಯನಾ ರಾಜೀವ್
|

Updated on: Jan 26, 2024 | 7:39 AM

Share

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಮೋಡಕವಿದ ವಾತಾವರಣವಿರಲಿದೆ, ಉತ್ತರ ಒಳನಾಡಿನಲ್ಲಿ ಭಾರಿ ಚಳಿ ಮುಂದುವರೆದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚಿದೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ 12.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, 30 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ

ಹೊನ್ನಾವರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಗಳೂರು ಏರ್​ಪೋರ್ಟ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹಾಸನದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 31. ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು