ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇಂದು ಮೋಡಕವಿದ ವಾತಾವರಣವಿರಲಿದೆ, ಉತ್ತರ ಒಳನಾಡಿನಲ್ಲಿ ಭಾರಿ ಚಳಿ ಮುಂದುವರೆದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡಿನಲ್ಲಿ ಚಳಿ ಹೆಚ್ಚಿದೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ
ಹೊನ್ನಾವರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರು ಏರ್ಪೋರ್ಟ್ನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾಸನದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 31. ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ