Karnataka Weather: ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ

|

Updated on: Jan 08, 2024 | 7:22 AM

ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣವಿರಲಿದ್ದು ಮುಂದಿನ ಎರಡು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ
ಮಳೆ
Image Credit source: Treehugger
Follow us on

ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣವಿರಲಿದ್ದು ಮುಂದಿನ ಎರಡು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಚನ್ನರಾಯಪಟ್ಟಣ, ತಿಪಟೂರು, ಗೋಕಾಕ್, ಬೈಲಹೊಂಗಲ, ಮೂರ್ನಾಡು, ಭಾಗಮಂಡಲ, ಸಕಲೇಶಪುರ, ಹುಣಸೂರು, ಗೋಕರ್ಣ, ಅರಕಲಗೂಡು, ತರೀಕೆರೆ, ಅಜ್ಜಂಪುರ, ಯುಗಟಿ, ಬೇಲೂರು, ಹಿರಿಯೂರು, ಕೃಷ್ಣರಾಜಪೇಟೆ, ಕೃಷ್ಣರಾಜಸಾಗರ, ಸಾಗರದಲ್ಲಿ ಮಳೆಯಾಗಿದೆ.

ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Weather: ಮೋಡಗಳ ನಡುವೆಯೇ ಇಣುಕಿದ ಸೂರ್ಯ, ಮುಂದಿನ 3 ದಿನ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ರಾಜ್ಯದ ಹಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಬೆಳಗಿನ ಜಾವ ದಟ್ಟ ಮಂಜು ಕವಿದಿರಲಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್​ ಇದೆ.

ಎಚ್​ಎಎಲ್​​ನಲ್ಲಿ 26.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರಿನಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ