Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ, ಕರಾವಳಿಯಲ್ಲಿ ತಾಪಮಾನ ಹೆಚ್ಚಳ

|

Updated on: Mar 05, 2025 | 7:48 AM

ಕರ್ನಾಟಕದ ಹವಾಮಾನದಲ್ಲಿ ಕೊಂಚ ಬದಲಾವಣೆ ಗೋಚರಿಸುತ್ತಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಇವುಗಳಲ್ಲಿ ಕೆಲವೆಡೆ ಮೋಡಕವಿದ ವಾತಾವರಣವಿರಲಿದೆ.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ, ಕರಾವಳಿಯಲ್ಲಿ ತಾಪಮಾನ ಹೆಚ್ಚಳ
ಮಂಜುಕವಿದ ವಾತಾವರಣ
Image Credit source: The Weather Channel
Follow us on

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನಿನ್ನೆಯಿಂದಲೂ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಇವುಗಳಲ್ಲಿ ಕೆಲವೆಡೆ ಮೋಡಕವಿದ ವಾತಾವರಣವಿರಲಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೀದರ್​ನಲ್ಲಿ 16.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಾರವಾರ, ಬಾಗಲಕೋಟೆ, ಧಾರವಾಡ, ಗದಗ ಮತ್ತು ಕಲಬುರಗಿ ಬೆಂಗಳೂರು ವಿಮಾನ ನಿಲ್ದಾಣ, ಚಿಂತಾಮಣಿಯಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿತ್ತು. ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಮಲೆನಾಡಿನಲ್ಲಿ ದಟ್ಟ ಮಂಜು, ಕರಾವಳಿಯಲ್ಲಿ ಉಷ್ಣ ಅಲೆ

ಗದಗದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೊಪ್ಪಳದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೆಐಎಎಲ್​ನಲ್ಲಿ33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:27 am, Wed, 5 March 25