ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಶನಿವಾರ (ಮಾರ್ಚ್ 30) ರಂದು ಅತ್ಯಧಿಕ 44.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ಬೀದರ್, ಬಾಗಲಕೋಟೆ, ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 42 ಡಿಗ್ರಿ ಸೆಲ್ಸಿಯಸ್ನಿಂದ 44.3 ಡಿಗ್ರಿ ಸೆಲ್ಸಿಯಸ್ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಯಚೂರು ಜಿಲ್ಲೆಯಲ್ಲಿ 18 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 16 ಸ್ಥಳಗಳು, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಲಾ 5 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 3 ಸ್ಥಳಗಳು, ಬೀದರ್ ಜಿಲ್ಲೆಯಲ್ಲಿ 2 ಸ್ಥಳಗಳು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ತಲಾ 1 ಸ್ಥಳಗಳಲ್ಲಿ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚು ದಾಖಲಾಗಿದೆ.
ಶಾಖದ ಅಲೆಯ ಎಚ್ಚರಿಕೆ: ಮುಂದಿನ ಮೂರು ದಿನಗಳಲ್ಲಿ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶಾಖದ ಅಲೆ ಹೆಚ್ಚಾಗಿ ಬೀಸುವ ಸಾಧ್ಯತೆಯಿದೆ.
ಉತ್ತರ ಒಳನಾಡು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ವರೆಗೆ ಹೆಚ್ಚಾಗುವ ಸಾಧ್ಯತೆಯಿದೆ. ಮಾರ್ಚ್ 30ರಿಂದ ಏಪ್ರಿಲ್ 1ರ ನಡುವೆ ಮಧ್ಯಪ್ರದೇಶ, ವಿದರ್ಭ ಮತ್ತು ಉತ್ತರ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಶಾಖದ ಅಲೆಯ ಹೆಚ್ಚಾಗಲಿದೆ.
ಹೀಟ್ ಸ್ಟ್ರೋಕ್ಗೆ ಒಳಗಾದ ವ್ಯಕ್ತಿಯನ್ನು ನೆರಳಿನ ಪ್ರದೇಶಕ್ಕೆ ಅಥವಾ ಒಳಾಂಗಣಕ್ಕೆ ಕರೆದುಕೊಂಡು ಹೋಗಿ. ನಂತರ ತುರ್ತು ವೈದ್ಯಕೀಯ ಸಹಾಯಕ್ಕಾಗಿ ಕರೆ ಮಾಡಿ. ವೈದ್ಯಕೀಯ ಸಹಾಯ ಬರುವವರೆಗೂ ಈ ಕ್ರಮಗಳನ್ನು ಪಾಲಿಸಿ..
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ