ಕರ್ನಾಟಕದ ಹಲವೆಡೆ ಗರಿಷ್ಠ ತಾಪಮಾನದಲ್ಲಿ ಏರಿಕೆ ಕಾಣುತ್ತಿದೆ, ಚಳಿಯು ಹೇಳ ಹೆಸರಿಲ್ಲದಂತೆ ಮಾಯವಾಗಿದೆ. ಆದರೆ ಡಿಸೆಂಬರ್ 27 ರಿಂದ ಎರಡು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಶಿವಮೊಗ್ಗ, ರಾಮನಗರ,ಮೈಸೂರು, ಕೋಲಾರ, ಕೊಡಗು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ,ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ.
ಚಾಮರಾಜನಗರದಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಆಂಧ್ರಪ್ರದೇಶ, ತಮಿಳುನಾಡು ಕರಾವಳಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ, ಚಂಡಮಾರುತ ಪರಿಚಲನೆ ಉಂಟಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಎಚ್ಎಎಲ್ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಇಂದಿನಿಂದ ಡಿ.28ರವರೆಗೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯ ಮುನ್ಸೂಚನೆ
ಹೊನ್ನಾವರದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಡಿಮೆ ಒತ್ತಡದ ಪರಿಣಾಮ ಬಾಪಟ್ಲಾ ಜಿಲ್ಲೆಯ ಕರಾವಳಿ ಭಾಗದಲ್ಲಿ ಬೆಳಗಿನಿಂದಲೇ ತುಂತುರು ಮಳೆಯಾಗುತ್ತಿದೆ. ಚಿರಾಳ, ಬಾಪಟ್ಲ, ಕರಚೇಡು, ಪರ್ಚೂರು, ಮರ್ತೂರು, ವೇಟಪಾಲೆಂ, ಬಾಪಟ್ಲ, ಪಿ.ವಿ.ಪಾಲೆಂ, ಚಿತಾಂಬ, ಸಂತೆಮಗುಳೂರು, ನಿಜಾಂಪಟ್ಣಂ, ರಾಯಪಳ್ಳ ಪ್ರದೇಶಗಳಲ್ಲಿ ಮಳೆಯಾಗಲಿದೆ.
ತಿರುಪತಿ ಮತ್ತು ನೆಲ್ಲೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗಂಟೆಗೆ 35 ರಿಂದ 45 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ