Karnataka Weather: ಇಂದಿನಿಂದ ಡಿ.28ರವರೆಗೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯ ಮುನ್ಸೂಚನೆ

ಕರ್ನಾಟಕದ ವಿವಿಧೆಡೆ ಇಂದಿನಿಂದ ಡಿ.28ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Weather: ಇಂದಿನಿಂದ ಡಿ.28ರವರೆಗೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯ ಮುನ್ಸೂಚನೆ
Rain 2024 12 24t073015.191
Image Credit source: PTI

Updated on: Dec 24, 2024 | 7:31 AM

ಡಿಸೆಂಬರ್ ಕಳೆಯುತ್ತಾ ಬಂದರೂ ಚಳಿಯ ಪ್ರಮಾಣ ಕಡಿಮೆಯೇ ಇದೆ. ಡಿಸೆಂಬರ್ 28ರವರೆಗೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಧಾರವಾಡ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ಬಿಸಿಲಿರಲಿದ್ದು ಡಿ.26ರ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ 5 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ

ಬೀದರ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆಯಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us