Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜ.14ರಿಂದ ಮಳೆ

ಕರ್ನಾಟಕದಾದ್ಯಂತ ಚಳಿ ಮುಂದುವರೆದಿದೆ, ಅದರ ಬೆನ್ನಲ್ಲೇ ಚಂಡಮಾರುತದ ಆಗಮನವೂ ಆಗುತ್ತಿದ್ದು, ಸಂಕ್ರಾಂತಿಯಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಶ್ರೀಲಂಕಾದ ಪೂರ್ವ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಮುಂದುವರೆದಿದೆ.

Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜ.14ರಿಂದ ಮಳೆ
ಮಳೆ
Image Credit source: PTI

Updated on: Jan 13, 2025 | 7:43 AM

ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜನವರಿ 14 ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರ್ಷದ ಮೊದಲ ಚಂಡಮಾರುತದ ಆಗಮನವಾಗುತ್ತಿದ್ದು, ಇದರ ಪರಿಣಾಮ 10ಕ್ಕೂ ಹೆಚ್ಚಿನ ಜಿಲ್ಲೆಗಳ ಮೇಲಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ವಿಜಯನಗರ, ಶಿವಮೊಗ್ಗ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ,ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ,ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಒಣಹವೆ ಇರಲಿದೆ.

ದಾವಣಗೆರೆಯಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬೆಳಗಿನ ಜಾವ ಹಲವೆಡೆ ಮಂಜು ಬಿದ್ದಿದೆ. ಶ್ರೀಲಂಕಾದ ಪೂರ್ವ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಮುಂದುವರೆದಿದೆ.

ಎಚ್​ಎಎಲ್​ನಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 am, Mon, 13 January 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us