AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಮುಂದಿನ ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ, ಮಾರ್ಚ್​ 23ರಿಂದ ಒಂದು ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

Karnataka Weather: ಮುಂದಿನ ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಮಳೆ Image Credit source: India.com
ನಯನಾ ರಾಜೀವ್
|

Updated on: Mar 20, 2025 | 7:21 AM

Share

ಬೆಂಗಳೂರು, ಮಾರ್ಚ್​ 20: ಕರ್ನಾಟಕದಾದ್ಯಂತ ದಿನದಿಂದ ದಿನಕ್ಕೆ ತಾಪಮಾನದಲ್ಲಿ ಏರಿಕೆ ಕಾಣುತ್ತಿದೆ. ಉಷ್ಣಾಂಶ ಹೆಚ್ಚಾದಾಗಲೆಲ್ಲಾ ಮಳೆಯ ಆಗಮನವಾಗುತ್ತದೆ. ಮುಂದಿನ ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ನಾಪೊಕ್ಲು, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 20.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್​ 23ರಿಂದ ಮಳೆ

ಬೀದರ್​ನಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.0 ಡಿಗ್ರು ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ