Karnataka Weather: ಸೆ 22 ರವರೆಗೆ ಕರ್ನಾಟಕದಲ್ಲಿ ಮಳೆ, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಸೆಪ್ಟೆಂಬರ್ 22 ರವರೆಗೆ ಮಳೆ ಮುಂದುವರೆಯಲಿದೆ. ಹಲವು ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ಹಳ್ಳಗಳು ಉಕ್ಕಿ ಹರಿಯುತ್ತಿದ್ದು, ಬೆಳೆ ನಷ್ಟವಾಗಿದೆ.

Karnataka Weather: ಸೆ 22 ರವರೆಗೆ ಕರ್ನಾಟಕದಲ್ಲಿ ಮಳೆ, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Rain

Updated on: Sep 20, 2025 | 7:47 AM

ಬೆಂಗಳೂರು, ಸೆಪ್ಟೆಂಬರ್​ 20: ಕಳೆದ ಮೂರು ದಿನಗಳಿಂದ ಭಾರೀ ಮಳೆ (rain) ಆಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ಹಳ್ಳಗಳು ಉಕ್ಕಿಹರಿಯುತ್ತಿವೆ. ಜಮೀನುಗಳಿಗೂ ನೀರು ನುಗ್ಗಿ ಅಪಾರ ಬೆಳೆ ಹಾಳಾಗಿದೆ. ಈ ಮಧ್ಯೆ ಕರ್ನಾಟಕದಲ್ಲಿ (Karnataka) ಇನ್ನೂ ಸೆ. 22 ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಕರಾವಳಿ ಜಿಲ್ಲೆಗಳು ಅಂದರೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ.

ಇದನ್ನೂ ಓದಿ: Karnataka Weather: ಈ ವಾರಾಂತ್ಯ ಬೆಂಗಳೂರಿನಲ್ಲಿ ಧಾರಾಕಾರ ಮಳೆ, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆೇಂಗಳೂರು ಮತುೆಸುತೆಮುತೆಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಟ ಮತ್ತು ಕನಿಷ್ಟ ತಾಪಮಾನ ಕ್ರಮವಾಗಿ 27°C ಮತುೆ 20°C ಇರುವ ಸಾಧ್ಯತೆ ಇದೆ.

ನಿನ್ನೆ ರಾಜ್ಯದಲ್ಲಿ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು ನಗರ, ಕೋಲಾರ, ಗದಗ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ 18 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಿದೆ. ವಿಜಯಪುರ, ಕೊಪ್ಪಳ ಮತ್ತು ತುಮಕೂರಿನಲ್ಲಿ ಸಾಧಾರಣ ಮಳೆ ಸುರಿದಿದೆ.


ಯಾದಗಿರಿ, ಕಲಬುರಗಿ, ಬೆಳಗಾವಿ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಉತ್ತರ ಕನ್ನಡ, ಕೊಡಗು ಮತ್ತು ಮಂಡ್ಯದಲ್ಲಿ ಕೂಡ ಸಾಧಾರಣ ಮಳೆ ಆಗಿದೆ. ಬೀದರ್, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಧಾರವಾಡ, ವಿಜಯನಗರ, ಶಿವಮೊಗ್ಗ, ಮೈಸೂರು, ಹಾವೇರಿ, ಮತ್ತು ದಾವಣಗೆರೆಯ ಕೆಲವೆಡೆ ಸಾಧಾರಣ ಮಳೆ ಆಗಿದೆ. ಒಟ್ಟಾರೆ ರಾಜ್ಯದಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಸುರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.