Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ
ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ. ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ. ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದೆ. ದಕ್ಷಿಣ ಒಳನಾಡಿನ ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ಉತ್ತ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.ಮುಂದಿನ 24 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಹಾಗೆಯೇ ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಮತ್ತಷ್ಟು ಓದಿ:India Weather Updates: ಕರ್ನಾಟಕದಲ್ಲಿ ಒಣಹವೆ, ಅರುಣಾಚಲ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಸಾಧ್ಯತೆ
ಬೆಂಗಳೂರಿನ ಎಚ್ಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೊಡಗು, ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬೆಳಗಾವಿ ಏರ್ಪೋರ್ಟ್ನಲ್ಲಿ 12.2 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ