Karnataka Rain Alert: ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.17ರಿಂದ ಎರಡು ದಿನಗಳ ಕಾಲ ಮಳೆ

ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 17ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದಲ್ಲಿ ಚಳಿ ಆರಂಭವಾಗಿದೆ, ಜತೆಗೆ ಮೋಡಕವಿದ ವಾತಾವರಣವೂ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rain Alert: ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.17ರಿಂದ ಎರಡು ದಿನಗಳ ಕಾಲ ಮಳೆ
ಮಳೆ
Image Credit source: English Jagaran

Updated on: Dec 16, 2023 | 7:33 AM

ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 17ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದಲ್ಲಿ ಚಳಿ ಆರಂಭವಾಗಿದೆ, ಜತೆಗೆ ಮೋಡಕವಿದ ವಾತಾವರಣವೂ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ವಿಜಯಪುರದಲ್ಲಿ 9.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಬಹುತೇಕ ಕಡೆ ಚಳಿ, ಡಿ.17ರಿಂದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಎಚ್​ಎಎಲ್​ನಲ್ಲಿ 26.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 2.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us