AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರಲ್ಲಿ ಇಂದು ಮಳೆ ಜೋರು, ಕರ್ನಾಟಕದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಇಂದು ಕೂಡ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಮೈಸೂರು, ಹಾಸನ ಸೇರಿ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಹೆಚ್ಚು ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಬೆಂಗಳೂರಲ್ಲಿ ಇಂದು ಮಳೆ ಜೋರು, ಕರ್ನಾಟಕದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಮಳೆ Image Credit source: Melli O'brien
ನಯನಾ ರಾಜೀವ್
|

Updated on: May 02, 2025 | 7:18 AM

Share

ಬೆಂಗಳೂರು, ಮೇ 02: ಕರ್ನಾಟಕದಾದ್ಯಂತ ಇಂದು ಭಾರಿ ಮಳೆ(Rain)ಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಲ್ಲಿ ಇಂದು ಗೂಡ ಗುಡುಗು ಸಹಿತ ಮಳೆಯಾಗಲಿದೆ, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ.

ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಹೆಚ್ಚು ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು, ಕೆಆರ್​ಪೇಟೆ, ಹಿರಿಯೂರು, ಟಿಜಿ ಹಳ್ಳಿ, ಮೈಸೂರು, ಗುಬ್ಬಿ, ಬೆಳ್ತಂಗಡಿ, ಸುಳ್ಯ, ನಾಗಮಂಗಲ, ಗೌರಿಬಿದನೂರು, ತೊಂಡೆಬಾವಿ, ಕೃಷ್ಣರಾಜಸಾಗರ, ಉಪ್ಪಿನಂಗಡಿ, ಮದ್ದೂರು, ಬಾಳೆಹೊನ್ನೂರು, ಕೊಟ್ಟಿಗೆಹಾರ, ಚಿತ್ರದುರ್ಗ, ಕುಣಿಗಲ್​ನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 42.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
Image
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
Image
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
Image
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮತ್ತಷ್ಟು ಓದಿ: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಇಂದು ಮಳೆ, ಕಲಬುರಗಿಯಲ್ಲಿ ಹೆಚ್ಚು ಉಷ್ಣಾಂಶ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್​ಎಎಲ್​ನಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 40.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 42.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್​​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 40.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ