Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಕೊಡಗು ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ
ಕರ್ನಾಟಕದ ವಿವಿಧೆಡೆ ಮುಂದಿನ ನಾಲ್ಕು ದಿನಗಳ ಕಾಲ ಮಳೆಯ ಮುಂದುವರೆಯಲಿದ್ದು 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಯಾದಗಿರಿ, ಹಾಸನ, ಮೈಸೂರು ಸೇರಿ ಹಲವು ಜಿಲ್ಲಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ,ಕೊಡಗು, ಶಿವಮೊಗ್ಗ, ಉತ್ತರ ಒಳನಾಡಿನ ಯಾದಗಿರಿ, ಕಲಬುರಗಿಯಲ್ಲಿ ಇಂದಿನಿಂದ ಮೇ 17ರವರೆಗೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಇಂದೂ ಕೂಡ ಮಳೆ ಮುಂದುವರೆಯಲಿದೆ.
ಪುತ್ತೂರು, ರಾಯಚೂರು, ಉಪ್ಪಿನಂಗಡಿ, ಕೊಟ್ಟಿಗೆಹಾರ, ಗಬ್ಬೂರಿನಲ್ಲಿ ಹೆಚ್ಚು ಮಳೆಯಾಗಿದೆ. ಕಡೂರು, ಕೊಪ್ಪ, ಹುಣಸೂರು, ಕುರ್ಡಿ,ಔರಾದ್, ಚಿಕ್ಕಮಗಳೂರು, ಕಳಸ, ಗುತ್ತಲ್, ತುಮಕೂರು, ಯುಗಟಿ, ತಿಪಟೂರು, ಕೆಆರ್ನಗರ, ಚನ್ನರಾಯಪಟ್ಟಣ, ಗೋಕರ್ಣ, ಮಾಣಿ, ಗುಬ್ಬಿ, ತರೀಕೆರೆ, ಮಧುಗಿರಿ, ಪರಶುರಾಂಪುರ, ಕುಡತಿನಿ, ಬರಗೂರು, ಕಮ್ಮರಡಿ,ಹಿರಿಯೂರು, ಆಗುಂಬೆಯಲ್ಲಿ ಮಳೆಯಾಗಿದೆ.
ಸೇಡಬಾಳ, ಹಾವೇರಿ, ಬೆಳಗಾವಿ, ಜೋಯಿಡಾ, ಪಣಂಬೂರು, ಮೈಸೂರು, ಚಿತ್ರದುರ್ಗ, ರಾಮನಗರ, ಚಿಂತಾಮಣಿ, ಮಾನ್ವಿ, ಸವಣೂರು, ಧರ್ಮಸ್ಥಳ, ಸಂಕೇಶ್ವರ, ಗೇರುಸೊಪ್ಪ, ಧರ್ಮಸ್ಥಳ, ಜಯಪುರ, ಭಾಗಮಂಡಲ, ದಾವಣಗೆರೆ, ಸೋಮವಾರಪೇಟೆ, ಬೇಲೂರು, ನಾಯಕನಹಟ್ಟಿಯಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ 18ರವರೆಗೂ ಮಳೆ
ರಾಯಚೂರಿನಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಎಚ್ಎಎಲ್ನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ವಿಜಯಪುರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ