AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಹಲವೆಡೆ ಮತ್ತೆ ಮುಂಗಾರು ಚುರುಕು, ಈ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ ಹಲವೆಡೆ ಮುಂಗಾರು ಚುರುಕುಗೊಂಡಿದ್ದು ಮತ್ತೆ ಮಳೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.

Karnataka Weather: ಕರ್ನಾಟಕದ ಹಲವೆಡೆ ಮತ್ತೆ ಮುಂಗಾರು ಚುರುಕು, ಈ ಜಿಲ್ಲೆಗಳಲ್ಲಿ ಮಳೆ
ಮಳೆ
ನಯನಾ ರಾಜೀವ್
|

Updated on: Aug 09, 2023 | 7:28 AM

Share

ಕರ್ನಾಟಕದ ಹಲವೆಡೆ ಮುಂಗಾರು ಚುರುಕುಗೊಂಡಿದ್ದು ಮತ್ತೆ ಮಳೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.

ಕ್ಯಾಸಲ್​ ರಾಕ್, ಕದ್ರಾ, ಸಿದ್ದಾಪುರ, ಶಿರಾಲಿ, ಲೋಂಡಾ, ಮಂಚಿಕೆರೆ, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಉಡುಪಿ, ಕಾರ್ಕಳ, ಮುನಿರಾಬಾದ್​, ಶಿಡ್ಲಘಟ್ಟ, ಬೆಂಗಳೂರು ನಗರದಲ್ಲಿ ಮಳೆಯಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rains: ಆಗಸ್ಟ್ 14ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು ಇಂದು ಮಳೆಯಾಗುವ ಸಾಧ್ಯತೆ ಇದೆ.ಎಚ್​ಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದೇಶಾದ್ಯಂತ ಮುಂಗಾರು ವ್ಯಾಪಿಸಿದ್ದು, ಉತ್ತರ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗುತ್ತಿದೆ. ಭಾರತದ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಆಗಸ್ಟ್​ 9 ರಂದು ಅತಿಯಾಗಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಿಹಾರ, ಜಾರ್ಖಂಡ್‌, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್‌, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ ಉತ್ತರಾಖಂಡ, ಉತ್ತರ ಪ್ರದೇಶ ವ್ಯಾಪ್ತಿಯ ಪ್ರದೇಶಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ. ಉತ್ತರಾಖಂಡದ ಬಹುತೇಕ ಕಡೆಗಳಲ್ಲಿ ಆಗಸ್ಟ್‌ 10ರ ವರೆಗೆ ಭಾರೀ ಮಳೆ ಸುರಿಯಲಿದ್ದು, ಉಳಿದೆಡೆ ಸಾಧಾರಣ ಮಳೆಯಾಗಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ