Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ 4 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ

ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಆದರೆ ಗರಿಷ್ಠ ತಾಪಮಾನದಲ್ಲಿ ಯಾವುದೇ ಇಳಿಕೆ ಗೋಚರಿಸಿಲ್ಲ.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ 4 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ
ಮಳೆ
Image Credit source: Mint

Updated on: Feb 25, 2024 | 8:10 AM

ಕರ್ನಾಟಕದೆಲ್ಲೆಡೆ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆಯಾಗಿದೆ, ಈ ನಡುವೆಯೇ ದಕ್ಷಿಣ ಒಳನಾಡಿನ 4 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.

ದಕ್ಷಿಣ ಒಳನಾಡಿನ ಒಂದೆರಡು ಕಡೆ ಹಗುರ ಮಳೆಯಾಘುವ ಸಾಧ್ಯತೆ ಇದೆ, ಕರಾವಳಿ ಮತ್ತು ಉತ್ತರ ಒಣನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಅಂದಾಜಿಸಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 14.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: India Weather: ಈ ಮೂರು ರಾಜ್ಯಗಳಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​ ಘೋಷಣೆ

ಬೀದರ್​ನಲ್ಲಿ32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 33.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 34.6 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us