Karnataka Weather: ಕರ್ನಾಟಕದೆಲ್ಲೆಡೆ ಶೀತ ಗಾಳಿ, ಒಂದೆರಡು ದಿನಗಳ ಬಳಿಕ ಮಳೆ

ಕರ್ನಾಟಕದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳೇನೂ ಇಲ್ಲ, ಚಳಿ ಹಾಗೆಯೇ ಮುಂದುವರೆದಿದೆ, ಫೆಬ್ರವರಿ 2ರಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಚಳಿಗಾಳಿ, ಒಣಹವೆ ಮುಂದುವರೆಯಲಿದೆ.

Karnataka Weather: ಕರ್ನಾಟಕದೆಲ್ಲೆಡೆ ಶೀತ ಗಾಳಿ, ಒಂದೆರಡು ದಿನಗಳ ಬಳಿಕ ಮಳೆ
ಮಳೆ
Image Credit source: PTI

Updated on: Jan 30, 2025 | 7:21 AM

ಕರ್ನಾಟಕದೆಲ್ಲೆಡೆ ಶೀತಗಾಳಿ ಮುಂದುವರೆದಿದೆ, ಮುಂದಿನ ಒಂದೆರಡು ದಿನಗಳ ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಚಳಿಗಾಳಿ, ಒಣಹವೆ ಮುಂದುವರೆಯಲಿದೆ.

ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆಯಲ್ಲಿ 11.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಒಣಹವೆ ಮುಂದುವರೆಯಲಿದ್ದು, ಮಳೆಯ ಸಾಧ್ಯತೆ ಕಡಿಮೆ ಇದೆ.

ಎಚ್​ಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಸಯ್ ಗರಿಷ್ಠ ಉಷ್ಣಾಂಶ, 15.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಮುಂದಿನ ವಾರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ , ರಾಯಚೂರಿನಲ್ಲಿ 31.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us