Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ನವೆಂಬರ್ 22ರಿಂದ ಮಳೆ

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ನವೆಂಬರ್ 22ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ನವೆಂಬರ್ 22ರಿಂದ ಮಳೆ
ಮಳೆ
Image Credit source: Mint

Updated on: Nov 21, 2023 | 10:14 AM

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ನವೆಂಬರ್ 22ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಚಾಮರಾಜನಗರದಲ್ಲಿ 16.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನ 2 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ನವೆಂಬರ್ 22ರಂದು ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:27 am, Tue, 21 November 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us