AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಇಂದು ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯ ಮುನ್ಸೂಚನೆ

ಕರ್ನಾಟಕದಾದ್ಯಂತ ಬಿಸಿಲು ತೀವ್ರವಾಗಿದೆ, ಉತ್ತರ ಒಳನಾಡಿನ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ , ಚಿತ್ರದುರ್ಗ, ದಾವಣಗೆರೆ , ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Weather: ಇಂದು ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯ ಮುನ್ಸೂಚನೆ
ಮಳೆImage Credit source: Popular Mechanics
ನಯನಾ ರಾಜೀವ್
|

Updated on: Apr 08, 2024 | 7:34 AM

Share

ಇಂದು ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ , ಚಿತ್ರದುರ್ಗ, ದಾವಣಗೆರೆ , ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಲಬುರಗಿಯಲ್ಲಿ 43.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ರಾತ್ರಿಯೂ ತುಂಬಾ ಬೆಚ್ಚಗಿರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಎಚ್​ಎಎಲ್​ನಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 8ರ ಬಳಿಕ ಮಳೆ

ಹೊನ್ನಾವರದಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 40.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 39.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ