Karnataka Weather: ಇಂದು ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯ ಮುನ್ಸೂಚನೆ

|

Updated on: Apr 08, 2024 | 7:34 AM

ಕರ್ನಾಟಕದಾದ್ಯಂತ ಬಿಸಿಲು ತೀವ್ರವಾಗಿದೆ, ಉತ್ತರ ಒಳನಾಡಿನ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ , ಚಿತ್ರದುರ್ಗ, ದಾವಣಗೆರೆ , ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Weather: ಇಂದು ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯ ಮುನ್ಸೂಚನೆ
ಮಳೆ
Image Credit source: Popular Mechanics
Follow us on

ಇಂದು ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ , ಚಿತ್ರದುರ್ಗ, ದಾವಣಗೆರೆ , ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಲಬುರಗಿಯಲ್ಲಿ 43.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ರಾತ್ರಿಯೂ ತುಂಬಾ ಬೆಚ್ಚಗಿರಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಎಚ್​ಎಎಲ್​ನಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 8ರ ಬಳಿಕ ಮಳೆ

ಹೊನ್ನಾವರದಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 39.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 40.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 39.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ