Karnataka Weather: ಕರ್ನಾಟಕದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಕರ್ನಾಟಕದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಮಳೆ
Image Credit source: Indian Express

Updated on: Apr 28, 2023 | 7:25 AM

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಸುಬ್ರಹ್ಮಣ್ಯ, ಭಾಗಮಂಡಲ, ಶೃಂಗೇರಿ, ಬಾಳೆಹೊನ್ನೂರು, ಉಪ್ಪಿನಂಗಡಿ, ಸುಳ್ಯ, ಹಾರಂಗಿ, ನಿಡಿಗೆ, ಮಾಣಿ, ತ್ಯಾಗರ್ತಿ, ಕಳಸ, ಅಜ್ಜಂಪುರ, ಹಾಸನದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ

ಎಚ್​ಎಎಲ್​ನಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ತಮಿಳುನಾಡಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇರುವ ಕಾರಣ ಕರ್ನಾಟಕದ ಹವಾಮಾನದಲ್ಲೂ ಸಾಕಷ್ಟು ಬದಲಾವಣೆಗಳಾಗುತ್ತಿವೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:24 am, Fri, 28 April 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us