AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ರಾಜ್ಯದಲ್ಲಿ ಮಳೆಯ ಪ್ರಮಾಣ ಇಳಿಕೆ, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Weather: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾತ್ರ ನಾಳೆ ವರುಣಾರ್ಭಟ ಮುಂದುವರಿಯಲಿದ್ದು, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿಯೂ ಮಳೆ ಕಡಿಯಾಗುವ ನಿರೀಕ್ಷೆ ಇದೆ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದರೂ ಮಳೆಯ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

Karnataka Weather: ರಾಜ್ಯದಲ್ಲಿ ಮಳೆಯ ಪ್ರಮಾಣ ಇಳಿಕೆ, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಇಂದಿನ ಹವಾಮಾನ
ಭಾವನಾ ಹೆಗಡೆ
|

Updated on:Oct 13, 2025 | 8:46 AM

Share

ಬೆಂಗಳೂರು, ಅಕ್ಟೋಬರ್​ 13:  ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯ (Rain) ಪ್ರಮಾಣ ಕಡಿಮೆಯಾಗಲಿದ್ದು, ರಾಜ್ಯದ 4 ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಪ್ರದೇಶದಲ್ಲಿ ಕಡಿಮೆ ಪ್ರಮಾಣದ ಮಳೆಯಾಗಲಿದೆ. ಬೆಂಗಳೂರಲ್ಲಿಯೂ ಗುಡುಗು ಸಹಿತ ಸಣ್ಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ?

ಮೈಸೂರು ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಇಂದು ಉತ್ತಮ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆಯನ್ನು ನಿರೀಕ್ಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದ್ದು, ಮಳೆಯ ನಿರೀಕ್ಷೆ ಬಹಳ ಕಡಿಮೆ ಇದೆ.

ಬೆಂಗಳೂರು ಹವಾಮಾನ

ಬೆಂಗಳೂರಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಬಹುದೆಂದು ಅಂದಾಜಿಸಲಾಗಿದೆ. ಸುಮಾರು 1.8 ಮಿ.ಮೀ. ಯಿಂದ 14.7 ಮಿ.ಮೀ ಮಳೆಯಾಗಬಹುದು. ಗಾಳಿಯ ವೇಗ ಗಂಟೆಗೆ 10-13 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪೋಸ್ಟ್ ಇಲ್ಲಿದೆ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:19 am, Mon, 13 October 25

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!