
ಬೆಂಗಳೂರು, ಅಕ್ಟೋಬರ್ 13: ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯ (Rain) ಪ್ರಮಾಣ ಕಡಿಮೆಯಾಗಲಿದ್ದು, ರಾಜ್ಯದ 4 ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಪ್ರದೇಶದಲ್ಲಿ ಕಡಿಮೆ ಪ್ರಮಾಣದ ಮಳೆಯಾಗಲಿದೆ. ಬೆಂಗಳೂರಲ್ಲಿಯೂ ಗುಡುಗು ಸಹಿತ ಸಣ್ಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಇಂದು ಉತ್ತಮ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆಯನ್ನು ನಿರೀಕ್ಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದ್ದು, ಮಳೆಯ ನಿರೀಕ್ಷೆ ಬಹಳ ಕಡಿಮೆ ಇದೆ.
ಬೆಂಗಳೂರಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಬಹುದೆಂದು ಅಂದಾಜಿಸಲಾಗಿದೆ. ಸುಮಾರು 1.8 ಮಿ.ಮೀ. ಯಿಂದ 14.7 ಮಿ.ಮೀ ಮಳೆಯಾಗಬಹುದು. ಗಾಳಿಯ ವೇಗ ಗಂಟೆಗೆ 10-13 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪೋಸ್ಟ್ ಇಲ್ಲಿದೆ
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) ರಾಜ್ಯದಾದ್ಯಂತ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾದಾರಣ ಮಳೆ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 14 ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.#KSNDMC pic.twitter.com/O2di9DBE1B
— Karnataka State Natural Disaster Monitoring Centre (@KarnatakaSNDMC) October 13, 2025
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:19 am, Mon, 13 October 25