Karnataka Weather: ಹವಾಮಾನ ವರದಿ- ಮುಂದಿನ 5 ದಿನ ವರುಣನ ಆರ್ಭಟ.. ಕರ್ನಾಟಕ ಸೇರಿ ಅನೇಕ ರಾಜ್ಯದಲ್ಲಿ ಮಳೆ

ಕರಾವಳಿಯಲ್ಲಿ ಕಳೆದ ನಾಲ್ಕೈದು ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದ್ದು ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ.

Karnataka Weather: ಹವಾಮಾನ ವರದಿ- ಮುಂದಿನ 5 ದಿನ ವರುಣನ ಆರ್ಭಟ.. ಕರ್ನಾಟಕ ಸೇರಿ ಅನೇಕ ರಾಜ್ಯದಲ್ಲಿ ಮಳೆ
ಕರ್ನಾಟಕ ರಾಜ್ಯ ಹವಮಾನ ವರದಿ
Edited By:

Updated on: Jul 04, 2021 | 9:03 AM

ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶಿಸಿ ತಿಂಗಳು ಕಳೆದಿದೆ. ಈ ನಡುವೆ ಜೂನ್ ಮಧ್ಯದವರೆಗೆ ಸುರಿದಿದ್ದ ಮಳೆ ಬಳಿಕ ಕಡಿಮೆಯಾಗಿತ್ತು. ಈಗ ಮತ್ತೆ ಕಳೆದ ಒಂದು ವಾರದಿಂದ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಮಳೆ ಮುಂದುವರೆದಿದೆ. ಇಂದು ಕೂಡ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದ್ದು ನಾಳೆಯೂ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಕಳೆದ ನಾಲ್ಕೈದು ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದ್ದು ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಒಳನಾಡಿನಲ್ಲಿ ಜುಲೈ5ರ ವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. ಇನ್ನು 4-5 ದಿನದಿಂದ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಾಗಿದ್ದ ಮಳೆ ಇಂದಿನಿಂದ ಕೊಂಚ ಕಡಿಮೆಯಾಗಲಿದೆ. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತದೆ.

ಬೆಂಗಳೂರಿನಲ್ಲೂ ಮಳೆ ಮಳೆ
ಮಲೆನಾಡಿನಲ್ಲೂ ಇಂದು ಮಳೆಯಾಗಲಿದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 5ರವರೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲೂ ಈ ವಾರಾಂತ್ಯದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲೂ ಇಂದಿನಿಂದ ಸೋಮವಾರದವರೆಗೆ ಮಳೆಯಾಗಲಿದೆ.

ಇನ್ನು ಒಡಿಶಾ, ಭುವನೇಶ್ವರದಲ್ಲೂ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿವೆ. ಕೆಲ ಗ್ರಾಮಗಳಿಗೂ ಮಳೆ ನೀರು ನುಗ್ಗಿದೆ. ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ನಲ್ಲೂ ಇಂದು ಮಳೆಯಾಗಲಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬೈ, ಮೇಘಾಲಯದಲ್ಲಿ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ತುಂಬಿ ಹೋಗಿವೆ. ಮೇಘಾಲಯದಲ್ಲಿ ಮಳೆಗೆ ಸೇತುವೆಗಳೇ ಕೊಚ್ಚಿಕೊಂಡು ಹೋಗಿವೆ.

ಹಿಮಾಲಯ ಪರ್ವತಶ್ರೇಣಿ, ಸಿಕ್ಕಿಂ, ಬಿಹಾರ, ಅಸ್ಸಾಂ, ಮೇಘಾಲಯ, ಉತ್ತರಾಖಂಡ, ನಾಗಾಲ್ಯಾಂಡ್, ಅರುಣಾಚಲಪ್ರದೇಶ, ಮಿಜೋರಾಂ, ಪಶ್ಚಿಮ ಬಂಗಾಳ, ತಮಿಳುನಾಡು, ತೆಲಂಗಾಣ, ಪುದುಚೆರಿ, ಉತ್ತರ ಪ್ರದೇಶ, ಗೋವಾ, ಕರಾವಳಿ ಕರ್ನಾಟಕ, ಕೇರಳದಲ್ಲಿ ಇಂದು ಮಳೆಯ ಅಬ್ಬರ ಹೆಚ್ಚಾಗಲಿದೆ.

ಶನಿವಾರ ಮತ್ತು ಭಾನುವಾರದಂದು ಪಂಜಾಬ್, ಚಂಡೀಗಡ, ಹರಿಯಾಣ, ದೆಹಲಿ ಮತ್ತು ಪಶ್ಚಿಮ ಉತ್ತರ ಪ್ರದೇಶದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಜೊತೆಗೆ ಗಾಳಿಯು ಗಂಟೆಗೆ 40-50 ಕಿ.ಮೀ ವೇಗವಾಗಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆರಾಯ ಸೋಮವಾರ ಕೊಂಚ ಬಿಡುವು ನೀಡಲಿದೆ. ಆದರೆ ಜುಲೈ6 ಮತ್ತು 7ರಂದು ಮತ್ತೆ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Weather: ಹವಾಮಾನ ವರದಿ – ಇಂದು ರಾಜ್ಯದ ಕೆಲವೆಡೆ ಆರೆಂಜ್​ ಅಲರ್ಟ್​, ಯಾವ ಯಾವ ಭಾಗಗಳಲ್ಲಿ ಮಳೆ ಸಾಧ್ಯತೆ?