Karnataka Weather: ಕರಾವಳಿ ಸೇರಿದಂತೆ ರಾಜ್ಯದ ಈ ಪ್ರದೇಶಗಳಲ್ಲಿ ಇಂದು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದಾದ್ಯಂತ ಮುಂಗಾರು ದುರ್ಬಲವಾಗಿದ್ದು, ಬಿಸಿಲ ಝಳ ಹೆಚ್ಚಾಗಿದೆ. ಆದರು ರಾಜ್ಯದಲ್ಲಿ ಮುಂದಿನ ಎರಡು ವಾರಗಳ ಕಾಲ ಸಂಚಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಕರಾವಳಿ ಸೇರಿದಂತೆ ರಾಜ್ಯದ ಈ ಪ್ರದೇಶಗಳಲ್ಲಿ ಇಂದು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಮಳೆImage Credit source: India Today
Follow us
TV9 Web
| Updated By: ವಿವೇಕ ಬಿರಾದಾರ

Updated on: Oct 14, 2023 | 7:13 AM

ಕರ್ನಾಟಕದಾದ್ಯಂತ ಮುಂಗಾರು ದುರ್ಬಲವಾಗಿದ್ದು, ಬಿಸಿಲ ಝಳ ಹೆಚ್ಚಾಗಿದೆ. ಆದರು ರಾಜ್ಯದಲ್ಲಿ ಮುಂದಿನ ಎರಡು ವಾರಗಳ ಕಾಲ ಸಂಚಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ಅ.14) ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತರ ಕನ್ನಡದಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಹಾವೇರಿ ಜಿಲ್ಲೆಯಲ್ಲಿ ಇಂದು ಹಗುರ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಹಗುರ ಮಳೆಯಾಗಲಿದೆ. ಇನ್ನು ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಯಲ್ಲಿ ಒಣಹವೆ ಇರಲಿದೆ.

ಕಳೆದ 24ಗಂಟೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಬಾರ್ಯದಲ್ಲಿ ಅತ್ಯಧಿಕ 106 ಮಿಮೀ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ