Karnataka Rain: ಮುಂದಿನ 2 ದಿನಗಳ ಕಾಲ ಕರ್ನಾಟಕದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ
ಮುಂದಿನ 2 ದಿನಗಳ ಕಾಲ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಣೆ ಮುನ್ಸೂಚನೆ ನೀಡಿದೆ.
ಮುಂದಿನ 2 ದಿನಗಳ ಕಾಲ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಣೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್, ಕೊಪ್ಪಳ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿಯ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಸಂಜೆಯ ಸಮಯದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. ಮಳೆಯ ಯಾವುದೇ ಮುನ್ಸೂಚನೆ ಇಲ್ಲ. ಗೋಕಾಕ್, ಬೈಲಹೊಂಗಲ, ಔರಾದ್, ಮುಂಡಗೋಡ, ನರಗುಂದ, ಬೆಳಗಾವಿ, ಖಜೂರಿ, ಹುಮನಾಬಾದ್, ಶೃಂಗೇರಿಯಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rain: ರಾಜ್ಯದ ಹಲವೆಡೆ ವರ್ಷಧಾರೆ, ಮುಂದಿನ 2 ದಿನ ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ
ಧಾರವಾಡದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಈಗಾಗಲೇ ದಕ್ಷಿಣ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಹಾಸನದಲ್ಲಿ ಮೊದಲ ಮಳೆಯಾಗಿದೆ. ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡರೆ ರೈತರ ಮೊಗದಲ್ಲಿ ಮಂದಹಾಸ ಬೀರಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ