Karnataka Rain: ಮುಂದಿನ 2 ದಿನಗಳ ಕಾಲ ಕರ್ನಾಟಕದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಮುಂದಿನ 2 ದಿನಗಳ ಕಾಲ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಣೆ ಮುನ್ಸೂಚನೆ ನೀಡಿದೆ.

Karnataka Rain: ಮುಂದಿನ 2 ದಿನಗಳ ಕಾಲ ಕರ್ನಾಟಕದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ
ಮಳೆ
Image Credit source: Mint

Updated on: Apr 09, 2023 | 7:55 AM

ಮುಂದಿನ 2 ದಿನಗಳ ಕಾಲ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಣೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್, ಕೊಪ್ಪಳ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿಯ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಸಂಜೆಯ ಸಮಯದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. ಮಳೆಯ ಯಾವುದೇ ಮುನ್ಸೂಚನೆ ಇಲ್ಲ. ಗೋಕಾಕ್, ಬೈಲಹೊಂಗಲ, ಔರಾದ್, ಮುಂಡಗೋಡ, ನರಗುಂದ, ಬೆಳಗಾವಿ, ಖಜೂರಿ, ಹುಮನಾಬಾದ್, ಶೃಂಗೇರಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain: ರಾಜ್ಯದ ಹಲವೆಡೆ ವರ್ಷಧಾರೆ, ಮುಂದಿನ 2 ದಿನ ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ

ಧಾರವಾಡದಲ್ಲಿ 36.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈಗಾಗಲೇ ದಕ್ಷಿಣ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಹಾಸನದಲ್ಲಿ ಮೊದಲ ಮಳೆಯಾಗಿದೆ. ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡರೆ ರೈತರ ಮೊಗದಲ್ಲಿ ಮಂದಹಾಸ ಬೀರಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us