AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕ ಹವಾಮಾನ – ರಾಜ್ಯಾದ್ಯಂತ ಮೈಕೊರೆವ ಚಳಿ, ಅಲ್ಲಲ್ಲಿ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಮೈಕೊರೆವ ಚಳಿ ಆರಂಭವಾಗಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 17 ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಹಾಗೆಯೇ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ.

Karnataka Weather: ಕರ್ನಾಟಕ ಹವಾಮಾನ - ರಾಜ್ಯಾದ್ಯಂತ ಮೈಕೊರೆವ ಚಳಿ, ಅಲ್ಲಲ್ಲಿ ಮಳೆ ಸಾಧ್ಯತೆ
ಚಳಿImage Credit source: Indian Express
ನಯನಾ ರಾಜೀವ್
| Edited By: |

Updated on:Dec 14, 2023 | 12:00 PM

Share

ಕರ್ನಾಟಕದಾದ್ಯಂತ ಮೈಕೊರೆವ ಚಳಿ ಆರಂಭವಾಗಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 17 ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಹಾಗೆಯೇ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ.

ಸುಳ್ಯದಲ್ಲಿ ಬುಧವಾರ ಮಳೆಯಾಗಿದೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ವಿಜಯಪುರದಲ್ಲಿ 12.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಬರುವ ಸಾಧ್ಯತೆ ಕಡಿಮೆ ಇದೆ. ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ವಿಮಾನ ನಿಲ್ದಾಣ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ರಾಯಚೂರು ಭಾಗದಲ್ಲಿ 17 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರದಲ್ಲಿ 12, ಚಿಕ್ಕಮಗಳೂರಿನಲ್ಲಿ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ರಾಜ್ಯಾದ್ಯಂತ ಚಳಿ, ದಕ್ಷಿಣ ಒಳನಾಡು, ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಈ ಮೂಲಕ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಚಳಿ ಆವರಿಸುತ್ತಿದೆ. ದಿನೇ ದಿನೇ ವಾತಾವರಣದಲ್ಲಿನ ತಂಪು ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ. ಉತ್ತರ ಒಳನಾಡಿನಲ್ಲಿ ಈ ವಾರಪೂರ್ತಿ ಶುಷ್ಕ ವಾತಾವರಣವೇ ಇರಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:28 am, Thu, 14 December 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!