Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಆಗಸ್ಟ್ 16ರವರೆಗೆ ಮಳೆ

|

Updated on: Aug 10, 2023 | 7:55 AM

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಆಗಸ್ಟ್ 16ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಆಗಸ್ಟ್ 16ರವರೆಗೆ ಮಳೆ
ಮಳೆ
Follow us on

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಆಗಸ್ಟ್ 16ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಕೋಟ, ಶಿರಾಲಿ, ಕ್ಯಾಸಲ್​ ರಾಕ್, ಪಣಂಬೂರು, ಗೇರುಸೊಪ್ಪ, ಹೊನ್ನಾವರ, ಪೊನ್ನಂಪೇಟೆ, ವಿರಾಜಪೇಟೆ, ಚಿಕ್ಕಬಳ್ಳಾಪುರ, ಉಪ್ಪಿನಂಗಡಿ, ಸುಳ್ಯ, ಮಂಕಿ, ಗೋಕರ್ಣ, ಕುಮಟಾ, ಕದ್ರಾ, ಉಡುಪಿ, ಇಳಕಲ್, ಬಾಗಲಕೋಟೆ, ಮಸ್ಕಿ, ಮುದಗಲ್, ನಾಪೋಕ್ಲು, ಲಿಂಗನಮಕ್ಕಿ, ಚಿಕ್ಕನಹಳ್ಳಿ, ಕೊನೇಹಳ್ಳಿಯಲ್ಲಿ ಮಳೆಯಾಗಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಹಲವೆಡೆ ಮತ್ತೆ ಮುಂಗಾರು ಚುರುಕು, ಈ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು ಒಂದೆಡೆ ಮೋಡಕವಿದ ವಾತಾವರಣವಿದೆ, ಆದರೂ ಬಿಸಿಲು ಆಗಾಗ ಕಾಣಿಸಿಕೊಳ್ಳುತ್ತಿದೆ, ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ.
ಎಚ್​ಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ ರಾಕ್‌ನಲ್ಲಿ 4 ಸೆಂ.ಮೀ, ಕದ್ರಾದಲ್ಲಿ 3 ಸೆಂ.ಮೀ ಮಳೆಯಾಗಿದೆ. ಉಡುಪಿಯ ಸಿದ್ದಾಪುರ, ಶಿರಾಲಿ, ಲೋಂಡಾದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.  ಹಾಗೆಯೇ ಮಂಚಿಕೆರೆ, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಉಡುಪಿ, ಕಾರ್ಕಳ, ಮುನಿರಾಬಾದ್‌, ಹಾಗೂ ಶಿಢ್ಲಘಟ್ಟದಲ್ಲಿ ತಲಾ ಒಂದು ಸೆಂ.ಮೀ ಮಳೆಯಾಗಿದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ