Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ, ಉಳಿದೆಡೆ ಒಣಹವೆ ಮುಂದುವರಿಕೆ
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಸಂಜೆಯ ವೇಳೆ ಸ್ವಲ್ಪ ಮೋಡ ಮುಸುಕುವ ಸಾಧ್ಯತೆ ಇದೆ. ಧಾರವಾಡ ಹಾಗೂ ಲೋಂಡದಲ್ಲಿ ಮಳೆಯಾಗಿದೆ, ಕಲಬುರಗಿಯಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಕೊಪ್ಪಳ, ಗದಗ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಇಂದು ಆಲಿಕಲ್ಲು ಸಮೇತ ಭಾರೀ ಮಳೆಯಾಗಿದೆ. ಗದಗ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದು, ಕಲಬುರಗಿಯಲ್ಲಿ ಓರ್ವ ರೈತ ಸಾವನ್ನಪ್ಪಿದ್ದಾರೆ.
ಮತ್ತಷ್ಟು ಓದಿ: Karnataka Rain: ಏಪ್ರಿಲ್ 10ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
ಗದಗ ಜಿಲ್ಲೆ ರೋಣ ತಾಲೂಕಿನ ಕೊತಬಾಳ ಗ್ರಾಮದ ಸುತ್ತಮುತ್ತ ಹಿಮಪಾತದಂತೆ ಆಲಿಕಲ್ಲು ಮಳೆಯಾಗಿದ್ದು, ರೈತರಿಗೆ ಭಾರೀ ನಷ್ಟ ಎದುರಾಗಿದೆ. ಮನೆಯ ಮೇಲೆ ರಾಶಿ ರಾಶಿ ಆಲಿಕಲ್ಲು ಕಂಡು ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ