Karnataka Weather: ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ

|

Updated on: Dec 29, 2023 | 7:37 AM

ಮುಂದಿನ 3 ದಿನಗಳ ಕಾಲ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ
ಮಳೆ
Image Credit source: Hindustan Times
Follow us on

ಮುಂದಿನ 3 ದಿನಗಳ ಕಾಲ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ವಿಜಯಪುರದಲ್ಲಿ 10.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ:Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜ.1ರಿಂದ 3 ದಿನ ಮಳೆ ಸಾಧ್ಯತೆ, ಚಳಿ ಮುಂದುವರಿಕೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್​ ಹಾಗೂ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್​ ಇದೆ.
ಎಚ್​ಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ