Karnataka Weather: ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್​ 23ರಿಂದ ಮಳೆ

|

Updated on: Mar 19, 2025 | 7:22 AM

ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್​ 23ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಮೈಸೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಾಗ ಮಳೆಯಾಗುತ್ತಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

Karnataka Weather: ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್​ 23ರಿಂದ  ಮಳೆ
ಮಳೆ
Image Credit source: urBytus
Follow us on

ಬೆಂಗಳೂರು, ಮಾರ್ಚ್​ 19: ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್​ 23ರಿಂದ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರದ ಹಿಂದಷ್ಟೇ ಬೆಂಗಳೂರಿನ ಕೆಲವೆಡೆ ಮಳೆಯಾಗಿತ್ತು, ಅದಾದ ಬಳಿಕ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಎಂಎಂ ಹಿಲ್ಸ್​, ಎಚ್​ಡಿಕೋಟೆ, ಬಂಡೀಪುರ, ಸರಗೂರು, ಹುಣಸೂರು, ಮದ್ದೂರಿನಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಎಚ್​ಎಎಲ್​ನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಕಲಬುರಗಿ, ಬಾಗಲಕೋಟೆಯಲ್ಲಿ ಉಷ್ಣ ಅಲೆ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಎರಡು ದಿನ ಮಳೆ
ಕರ್ನಾಟಕದ ಹಲವೆಡೆ ಭಾರಿ ಮಳೆ: ಮಂಗಳೂರಿನಿಂದ ವಿಮಾನಗಳು ಡೈವರ್ಟ್‌
ಮಾರ್ಚ್​ 12ರಿಂದ 3 ದಿನಗಳ ಕಾಲ ಕರ್ನಾಟಕದ 14 ಜಿಲ್ಲೆಗಳಲ್ಲಿ ಮಳೆ

ಮತ್ತಷ್ಟು ಓದಿ:
Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ

ಹೊನ್ನಾವರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ