Karnataka Weather: ಏಪ್ರಿಲ್ 27ರವರೆಗೆ ಬೆಂಗಳೂರು, ಮೈಸೂರು, ಬಾಗಲಕೋಟೆ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 27ರವರೆಗೆ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 27ರವರೆಗೆ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಂಡೀಪುರದಲ್ಲಿ 4ಸೆಂ.ಮೀ ಮಳೆಯಾಗಿದೆ.
ಒಟ್ಟಾರೆ ಗುಡುಗು ಸಹಿತ ಮಳೆಯ ಜೊತೆಗೆ ಕೆಲ ಜಿಲ್ಲೆಗಳಲ್ಲಿ ಬಿಸಿಲಿಗೆ ಸಹ ಮುನ್ಸೂಚನೆ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರಿನಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ ವಾರ ಮಳೆಯಾಗುವ ಸಾಧ್ಯತೆಯಿಲ್ಲ. ಅಂದರೆ ಈ ಜಿಲ್ಲೆಗಳಲ್ಲಿ ಮುಂದಿನ ವಾರ ಒಣಹವೆಯೇ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮತ್ತಷ್ಟು ಓದಿ: Karnataka Weather: ಮುಂದಿನ 2 ದಿನ ಬೆಂಗಳೂರು ಸೇರಿ ರಾಜ್ಯದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಎಚ್ಎಎಲ್ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.